ಖಾಸಗಿ ಆಸ್ಪತ್ರೆಗಳ ಹಣದಾಹಕ್ಕೆ ಸರ್ಕಾರ ಬ್ರೇಕ್- ಸಿಟಿ ಸ್ಕ್ಯಾನಿಂಗ್ ಮತ್ತು ಎಕ್ಸ್ ರೆಗೆ ದರ ನಿಗದಿ

 ಬೆಂಗಳೂರು- ಖಾಸಗಿ ಆಸ್ಪತ್ರೆಗಳ ಹಣದಾಹಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಸಿಟಿ ಸ್ಕ್ಯಾನಿಂಗ್ ಮತ್ತು ಎಕ್ಸ್ ರೆಗೆ ಸರ್ಕಾರ ಹಣ ನಿಗಧಿ ಮಾಡಿದೆ. ಒಂದು ವೇಳೆ ಸರ್ಕಾರ ನಿಗಧಿ ಮಾಡಿರುವುದಕ್ಕಿಂತ ಹೆಚ್ಚು ಹಣ ಕೇಳಿದ್ರೆ ದೂರು ನೀಡಿ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.


ಸಿಟಿ ಸ್ಕ್ಯಾನಿಂಗ್ 1,500 ರೂಪಾಯಿ ಹಾಗೂ ಡಿಜಿಟಲ್ ಎಕ್ಸ್ ರೆಗೆ 250 ರೂಪಾಯಿ ನಿಗಧಿ ಮಾಡಿದೆ. ಇದಕ್ಕಿಂತ ಹೆಚ್ಚು ಹಣ ಕೇಳಿದ್ರೆ ಕೊಡಲು ಹೋಗಬೇಡಿ ಎಂದು ಡಾ.ಸುಧಾಕರ್ ಹೇಳಿದರು.



ಇನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನಿಂಗ್ ಮತ್ತು ಎಕ್ಸ್ ರೆಗೆ ಹಣ ಪಡೆಯದೆ ಉಚಿತವಾಗಿ ಮಾಡಲಾಗುವುದು. ಸಾರ್ವಜನಿಕರು ಇದರ ಸೌಲಭ್ಯ ಬಳಸಿಕೊಳ್ಳಬೇಕು ಎಂದು ಡಾ.ಸುಧಾಕರ್ ಸಲಹೆ ನೀಡಿದ್ದಾರೆ.