ಕರ್ನಾಟಕದ GST ಹಣ ಕೊಟ್ಟಿಲ್ಲ ಕನಿಷ್ಠ ಅವರು ಉತ್ಪಾದಿಸುವ ಆಕ್ಸಿಜನ್ ಅನ್ನು ಅವರಿಗೆ ಬಿಡಿ ಎಂದು ಬಿಜೆಪಿ ಸರಕಾರಕ್ಕೆ ಉಗಿದ ಸುಪ್ರೀಂ ಕೋರ್ಟ್

 ನವದೆಹಲಿ- ವಿರೋಧ ಪಕ್ಷಗಳು ಸೇರಿದಂತೆ ಜನರಿಂದ ತೀವ್ರ ಒತ್ತಡ ಬಂದರೂ ಡೋಂಟ್ ಕೇರ್ ಎನ್ನುತ್ತಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು ಬಿಸಿ ಮುಟ್ಟಿಸಿದೆ.


ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆಯಿಂದ ನೂರಾರು ಜನರು ಪ್ರಾಣ ಬಿಡುತ್ತಿದ್ದಾರೆ. ಈ ಸಂಬಂಧ ಕೂಡಲೇ 12 ಸಾವಿರ ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಬೇಕು ಎಂದು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು.
ಆದರೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ 12 ಸಾವಿರ ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡುವಂತೆ ತಾಕೀತು ಮಾಡಿದೆ.
ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆಯಿಂದ ನೂರಾರು ಜನರು ಸಾವನ್ನಪ್ಪುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಕ್ಸಿಜನ್ ನೀಡುವಂತೆ ಹೈಕೋರ್ಟ್ ಸರಿಯಾಗಿಯೇ ಹೇಳಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 12 ಸಾವಿರ ಮೆಟ್ರಿಕ್ ಟನ್ ಆಕ್ಸಿಜನ್ ನೀಡುವಂತೆ ಸುಪ್ರೀಂ ಕೋರ್ಟ್ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.